ವಿಷಯಕ್ಕೆ ಹೋಗಿ

ದೆಹಲಿಯಲ್ಲಿ ಅಕ್ಟೋಬರ್ 29ರಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಅಕ್ಟೋಬರ್ 29ರಿಂದ ಮಹಿಳೆಯರಿಗೆ ಉಚಿತ ಪ್ರಯಾಣಾವಕಾಶ ಕಲ್ಪಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 



ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಅಕ್ಟೋಬರ್ 29ರಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು. 

ಕಳೆದ ಕೆಲವು ದಿನಗಳ ಹಿಂದಷ್ಟೇ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದ್ದರು. ಅದಾದ ಬಳಿಕ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ನಂತರ ಪ್ರತಿ ಯುನಿಟ್‌ಗೆ ಅರ್ಧ ದರ ಎಂದು ಘೋಷಿಸಿದ್ದರು. 

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಯೋಜನೆಯಡಿಯಲ್ಲಿ ದೆಹಲಿ ಸರ್ಕಾರವು 700 ಕೋಟಿ ರೂಗಳನ್ನು ವೆಚ್ಚ ಮಾಡುತ್ತಿದೆ. ಸರ್ಕಾರವೇ ಟಿಕೆಟ್‌ಗಳನ್ನು ಖರೀದಿಸಲಿದೆ ಎಂದರು.

ಕಾಮೆಂಟ್‌ಗಳು

ನೆಚ್ಚಿನ ಪೋಸ್ಟ್