ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸೆಪ್ಟೆಂಬರ್, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕೇಜ್ರಿವಾಲರಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಶ್ಲಾಘನೆ

ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್‍ ರವರು ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ ಸಂತೋಷಸಹಿತ ಆಶ್ಚರ್ಯ ವ್ಯಕ್ತಪಡಿಸಿ, ಅರವಿಂದ ಕೇಜ್ರಿವಾಲ್‍ರಂತಹ ಪ್ರಾಮಾಣಿಕ ನಾಯಕರ ಅಗತ್ಯ ದೇಶಕ್ಕಿದೆ ಎಂದಿದ್ದಾರೆ.  ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಖಾಸಗಿಯವರು ಮೇಲುಗೈ ಸಾಧಿಸಿದ್ದು, ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ.  ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ.  ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳ ಬದುಕಿಗೆ ಅರ್ಥ ಕಲ್ಪಿಸಿದ್ದಾರೆ.  ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವ...