ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್. ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ವಿವರಣೆ ಮತ್ತು ಚಿತ್ರಗಳು

ಕೊರೊನಾ ವೈರಸ್ ಸೋಂಕಿತ ರೋಗಿಗಳ ಚಿಕಿತ್ಸೆಗೆ ಸಹಾಯಕವಾಗಲು ದೆಹಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ ಮಾಡಿದೆ. ದೇಶದಲ್ಲಿಯೇ ಮೊದಲು ಇಂತಹ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ. ಕೋವಿಡ್ - 19 ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಲಾ ದಾನ ಮಾಡಬಹುದು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಪತ್ರಿಕಾಗೋಷ್ಠಿ ನಡೆಸಿದರು. "ಜನರು ಬೇರೆಯವರ ಜೀವ ಉಳಿಸಲು ಪ್ಲಾಸ್ಮಾ ಬ್ಯಾಂಕ್‌ಗೆ ಪ್ಲಾಸ್ಮಾ ದಾನ ಮಾಡಬೇಕು. ದೆಹಲಿ ಜನರು ಬೇರೆಯವರ ಜೀವ ಉಳಿಸಲು ಇದು ಉತ್ತಮ ಅವಕಾಶ" ಎಂದು ಹೇಳಿದರು.  "ಯಾವುದೇ ವ್ಯಕ್ತಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖವಾಗಿದ್ದರೆ ಮತ್ತು 14 ದಿನದ ಐಸೋಲೇಷನ್ ಪೂರ್ಣಗೊಳಿಸಿದ್ದರೆ ಇನ್ನೊಬ್ಬರ ಜೀವ ಉಳಿಸಲು ಪ್ಮಾಸ್ಲಾ ದಾನ ಮಾಡಬಹುದು. ಜನರು 1031 ನಂಬರ್‌ಗೆ ಕರೆ ಮಾಡಿ ಪ್ಲಾಸ್ಮಾ ದಾನ ಮಾಡುವ ಬಗ್ಗೆ ಮಾಹಿತಿ ನೀಡಬಹುದು" ಎಂದರು. ಪ್ಮಾಸ್ಮಾ ದಾನ ಮಾಡಲು ಏನು ಮಾಡಬೇಕು? "ಜನರು ಪ್ಲಾಸ್ಮಾ ದಾನ ಮಾಡಲು ಬಯಸಿದರೆ 1031 ನಂಬರ್‌ಗೆ ಕರೆ ಮಾಡಬಹುದು ಅಥವ 8800007722 ನಂಬರ್‌ಗೆ ವಾಟ್ಸಪ್ ಸಂದೇಶ ಕಳಿಸಬಹುದು. ಬಳಿಕ ವೈದ್ಯರು ಅವರನ್ನು ಸಂಪರ್ಕಿಸುತ್ತಾರೆ" ಎಂದು ಅರವಿಂದ ಕೇಜ್ರಿವಾಲ್ ಹೇಳಿದರು. ಯಾರು ಪ್ಲಾಸ್ಮಾ ದಾನ ಮಾಡಬಹುದು? "ನೀವು ಕೋವಿಡ್ - 19 ಸೋಂಕಿನಿಂದ ಗುಣಮುಖರಾಗಿದ್ದು 18 ರಿಂದ 60 ವರ್ಷದವರಾಗಿದ್ದರೆ ಪ್ಲಾಸ್ಮಾ ...