ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

Internet ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ದೆಹಲಿಯಲ್ಲಿ 11,000 ಕಡೆ ಉಚಿತ ವೈಫೈ ಸೌಲಭ್ಯ

ವೈಫೈ ಹಾಟ್‌ಸ್ಪಾಟ್‌ಗಳ ಮೂಲಕ ನಿತ್ಯವೂ 1.5 ಜಿಬಿವರೆಗೂ ಡೇಟಾದ ಉಚಿತ ಅಂತರ್ಜಾಲ ಸೌಲಭ್ಯ ಒದಗಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು.  ಈ ಸವಲತ್ತಿನ ಮೂಲಕ ನಮ್ಮ ಪ್ರಣಾಳಿಕೆಯ ಕೊನೆಯ ಭರವಸೆಯನ್ನು ಪೂರ್ಣಗೊಳಿಸುತ್ತಿದ್ದೇವೆ. ಈ ಯೋಜನೆಯು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದು ತಿಳಿಸಿದರು.  ರಾಷ್ಟ್ರದ ರಾಜಧಾನಿಯಾದ್ಯಂತ ಸುಮಾರು 11,000 ಹಾಟ್‌ಸ್ಪಾಟ್‌ಗಳನ್ನು ಅಳವಡಿಸಲು ಸರ್ಕಾರ ಉದ್ದೇಶಿಸಿದೆ. ಡಿ.16ರ ವೇಳೆಗೆ 100 ಹಾಟ್‌ಸ್ಪಾಟ್‌ಗಳನ್ನು ಅಳವಡಿಸಲಾಗುವುದು. ನಂತರ ಪ್ರತಿ ವಾರ 500 ಹಾಟ್‌ಸ್ಪಾಟ್‌ಗಳನ್ನು ಅಳವಡಿಸಲಾಗುವುದು. ಎಲ್ಲ ಹಾಟ್‌ಸ್ಪಾಟ್‌ಗಳನ್ನೂ ಆರು ವಾರದ ಒಳಗೆ ಅಳವಡಿಸಲಾಗುತ್ತದೆ ಎಂದು ತಿಳಿಸಿದರು.  ಈ ಉದ್ದೇಶಕ್ಕಾಗಿ ಆಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಪ್ರೆಸ್ಟೋ ಎಂಬ ಕಂಪೆನಿ ಈ ಯೋಜನೆಯನ್ನು ನಿರ್ವಹಿಸುತ್ತಿದೆ. ದೆಹಲಿಯಾದ್ಯಂತ ಉಚಿತ ಇಂಟರ್ನೆಟ್ ಒದಗಿಸುವ ಈ ಯೋಜನೆಗೆ 100 ಕೋಟಿ ರೂ ವೆಚ್ಚ ತಗಲುತ್ತದೆ ಎಂದು ವಿವರಿಸಿದರು. ಇದರಿಂದ ದೆಹಲಿಯ ನಿವಾಸಿಗಳು ತಿಂಗಳಿಗೆ 15 ಜಿಬಿ ಡೇಟಾ ಪಡೆದುಕೊಳ್ಳಲಿದ್ದಾರೆ. 4,000 ಹಾಟ್‌ಸ್ಪಾಟ್‌ಗಳು ಬಸ್ ನಿಲ್ದಾಣಗಳಲ್ಲಿ ಲಭ್ಯವಾಗಲಿವೆ. ಇನ್ನು 7,000 ಮಾರುಕಟ್ಟೆ, ನಿವಾಸಿ ಅಭಿವೃದ್ಧಿ ಸಂಸ್ಥೆಗಳು ಮತ್ತು ನಗರದ ಇತರೆ ಸ್ಥಳಗಳಲ್ಲಿ ಸಿಗಲಿವೆ ಎಂದರು.  ಕನಿಷ...

ದೆಹಲಿಯಲ್ಲಿ ಉಚಿತ ನೀರು, ವಿದ್ಯುತ್ ಆಯ್ತು ಇದೀಗ ಉಚಿತ ವೈಫೈ ಸೌಲಭ್ಯ ಘೋಷಣೆ

ಇತ್ತೀಚೆಗಷ್ಟೇ 200 ಯೂನಿಟ್ ವರೆಗೆ ವಿದ್ಯುತ್ ಬಳಕೆ ಉಚಿತ ಎಂದು ಘೋಷಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಉಚಿತ ವೈಫೈ ಸೌಲಭ್ಯವನ್ನು ನೀಡುವ ಭರವಸೆಯನ್ನೂ ಕೂಡ ನೀಡಿದ್ದಾರೆ.  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರದಂದು ರಾಷ್ಟ್ರದ ರಾಜಧಾನಿಯಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಪ್ರತಿ ಬಳಕೆದಾರರಿಗೆ 15 ಜಿಬಿ ಡೇಟಾವನ್ನು ಉಚಿತವಾಗಿ ಪ್ರತಿ ತಿಂಗಳು 200 ಎಂಬಿಪಿಎಸ್ ವೇಗದಲ್ಲಿ ಇಂಟರ್ ನೆಟ್ ನೀಡಲಾಗುವುದು ಎಂದು ಹೇಳಿದರು.  ಕೆಲವು ತಿಂಗಳ ಹಿಂದೆ ಅಷ್ಟೇ ಮಹಿಳೆಯರಿಗೆ ಉಚಿತ ಮೆಟ್ರೋ ಸೇವೆ ಒದಗಿಸುವ ಪ್ರಸ್ತಾವವನ್ನು ಇಟ್ಟಿದ್ದರು.  ಮೊದಲ ಹಂತದ ಭಾಗವಾಗಿ ದೆಹಲಿಯಾದ್ಯಂತ 11,000 ಹಾಟ್‌ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು.ಈಗಾಗಲೇ ಉಚಿತ ವೈ-ಫೈ ಒದಗಿಸುವ ಕೆಲಸ ಪ್ರಾರಂಭವಾಗಿದೆ .ಈ ಯೋಜನೆ ಇನ್ನು ಮೂರು ನಾಲ್ಕು ತಿಂಗಳ ಅವಧಿಯ ಒಳಗೆ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊದಲ ಹಂತದ ಭಾಗವಾಗಿ ಒಟ್ಟು 11,000 ಹಾಟ್‌ಸ್ಪಾಟ್‌ಗಳಲ್ಲಿ 4,000 ಅನ್ನು ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾಗುವುದು ಮತ್ತು ಉಳಿದ 7,000 ದೆಹಲಿಯಾದ್ಯಂತದ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಇತ್ತೀಚೆಗಷ್ಟೇ ಉಚಿತ ವಿದ್ಯುತ್ ಸೌಲಭ್...